ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ರೈತ ಸಾವು

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ರೈತ ಸಾವು

45
0
SHARE

ಮಂಡ್ಯ(ಅ,18,2017): ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಂಜಾಂ ಗ್ರಾಮದ ನಿವಾಸಿಯಾದ ಶ್ರೀನಿವಾಸ್ (70) ಮೃತಪಟ್ಟ ರೈತ. ಶ್ರೀನಿವಾಸ್ ಅವರು ರಾತ್ರಿ ಜಮೀನಲ್ಲಿ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಈ ಘಟನೆ ಸಂಭವಿಸಿದೆ.

ಈ ಘಟನೆ ಕುರಿತಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY