ಪ್ರಧಾನಿ ನರೇಂದ್ರ ಮೋದಿ ಈ ತಿಂಗಳು 29.ರಂದು ಧರ್ಮಸ್ಥಳ‌ಕ್ಕೆ ಆಗಮನ

ಪ್ರಧಾನಿ ನರೇಂದ್ರ ಮೋದಿ ಈ ತಿಂಗಳು 29.ರಂದು ಧರ್ಮಸ್ಥಳ‌ಕ್ಕೆ ಆಗಮನ

54
0
SHARE

ಮಂಗಳೂರು(ಅ,20,2017): ಪ್ರಧಾನಿ ನರೇಂದ್ರ ಮೋದಿ ಅ.29 ಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು ಇದೆ ವೇಳೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ವಿಶೇಷ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಧರ್ಮಸ್ಥಳ್ಕಕೆ ತೆರಳಲಿದ್ದಾರೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಹಾಗೆಯೇ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸಾರ್ಥಕ ಸೇವೆ ಪೂರೈಸಿದ್ದು, ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಸಹ ಇದೇ ಸಮಯದಲ್ಲಿ ಆಯೋಜನೆಗೊಳ್ಳಲಿದೆ.

ಧರ್ಮಸ್ಥಳ ಗ್ರಾಮಾಭಿವೃದ್ದಿ ಸ್ವ ಸಹಾಯ ಗುಂಪುಗಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಈ ಯೋಜನೆ ಅಂತಾರಾಷ್ಟ್ರೀಯ ಮಟ್ಟದ ಮನ್ನಣೆಗೆ ಪಾತ್ರವಾಗಿದೆ. ಈ ಹಿಂದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ದಿ.ಅಬ್ದುಲ್ ಕಲಾಂ, ಕೇಂದ್ರ ಹಾಗೂ ರಾಜ್ಯ ಮಟ್ಟದ ಸಚಿವರು, ಸಂವಿಧಾನಿಕ ಹುದ್ದೆಯಲ್ಲಿದ್ದ ಗಣ್ಯರು ಸಹ ಭಾಗವಹಿಸಿದ್ದರು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

NO COMMENTS

LEAVE A REPLY