ಕಾರು,ಬೈಕ್ ನಡುವೆ ಅಪಘಾತ: ಫ್ಲೈ ಓವರ್ ಮೇಲಿಂದ ಬಿದ್ದು ಇಬ್ಬರು ಬೈಕ್ ಸವಾರರು ಸಾವು

ಕಾರು,ಬೈಕ್ ನಡುವೆ ಅಪಘಾತ: ಫ್ಲೈ ಓವರ್ ಮೇಲಿಂದ ಬಿದ್ದು ಇಬ್ಬರು ಬೈಕ್ ಸವಾರರು ಸಾವು

257
0
SHARE

ಬೆಂಗಳೂರು(ಸೆ.16.2017):ಫ್ಲೈ ಓವರ್ ಮೇಲೆ ಚಲಿಸಿತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ಹೊಸೂರು ರಸ್ತೆಯ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಈ ಘಟನೆ ನಡೆದಿದ್ದು. ಬೈಕ್ ಸವಾರರು ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದಿರುವ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿಸೆರೆಯಾಗಿವೆ.
ಕೆಎ-01 ಎಫ್-8965 ನಂಬರ್‌‌ನ ಕಾರು ಫ್ಲೈ ಓವರ್ ಮೇಲೆ ವೇಗವಾಗಿ ಬಂದು ಮುಂದೆ ಹೋಗುತ್ತಿದ್ದ ಬೈಕ್‌‌ಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರಿ ಮಾಡುತ್ತದ್ದ ಜಾಕೀರ್ ಹುಸೇನ್ (36) ಮತ್ತು ಫಕೃದ್ಧೀನ್ (34) ಮೃತಪಟ್ಟಿದ್ದಾರೆ.

ಇದ್ದಕ್ಕಿದ್ದಂತೆ ಫ್ಲೈ ಓವರ್ ಮೇಲಿಂದ ವ್ಯಕ್ತಿ ಕೆಳಗೆ ಬಿದ್ದಿದ್ದನ್ನು ನೋಡಿ ಜನ ಗಾಬರಿಯಾಗಿದ್ದಾರೆ.ಘಟನೆ ಬಗ್ಗೆ ಮಾಹಿತಿ ಪಡೆದ ಸಂಚಾರಿ ಪೊಲೀಸರು ತಕ್ಷಣವೇ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ. ಕಾರು ಚಾಲಕನನ್ನು ವಶಕ್ಕೆ ಪಡೆದಿರುವ ಮಡಿವಾಳ ಸಂಚಾರ ಪೊಲೀಸರು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಚಾಲಕನನ್ನು ಬಂಧಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರನ್ನು ವಶಕ್ಕೆ ಪಡೆಯಲಾಗಿದೆ.

NO COMMENTS

LEAVE A REPLY