ಟಿಪ್ಪು ಜಯಂತಿ ಆಚರಣೆಯ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಹಾಕಬೇಡಿ: ಸಂಸದೆ ಶೋಭಾ ಕರಂದ್ಲಾಜೆ

ಟಿಪ್ಪು ಜಯಂತಿ ಆಚರಣೆಯ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಹಾಕಬೇಡಿ: ಸಂಸದೆ ಶೋಭಾ ಕರಂದ್ಲಾಜೆ

192
0
SHARE

ಬೆಂಗಳೂರು(ಅ,21,2017): ರಾಜ್ಯ ಸರ್ಕಾರ ಏರ್ಪಡಿಸಿರುವ ಟಿಪ್ಪು ಜಯಂತಿ ಆಚರಣೆಯ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಿಸಬೇಡಿ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಜಿಲ್ಲಾಧಿಕಾರಿಗಳೆ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಸಂಸದೆ ಶೋಭ ಕರಂದ್ಲಾಜೆ ಈ ರೀತಿಯಲ್ಲಿ ಸೂಚನ ನೀಡಿದ್ದಾರೆ. ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ನಾವು ಭಾಗಿಯಾಗಲ್ಲ. ಶಿಷ್ಟಾಚಾರದ ಹೆಸರಿನಲ್ಲಿ ಆಹ್ವಾನ ಪತ್ರಿಕೆಯಲ್ಲಿ ನಮ್ಮ ಹೆಸರನ್ನ ಹಾಕಬೇಡಿ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಕೂಡ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಟಿಪ್ಪು ಜಯಂತಿ ಆಚರಿಸಬಾರದು. ಹಾಗೇನಾದರು ಅವಶ್ಯಕತೆ ಇದ್ದರೆ, ಕಾಂಗ್ರೆಸ್ ಪಕ್ಷದ ಹಣದಲ್ಲಿ ಜಯಂತಿ‌ ಆಚರಿಸಲಿ ಹಾಗೂ ಅವರ ಪಕ್ಷದ ಕಚೇರಿಗಳಲ್ಲಿ, ಅವರ ಮನೆಗಳಲ್ಲಿ ಜಯಂತಿ ಆಚರಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ  ಕಿಡಿಕಾರಿದ್ದಾರೆ.

NO COMMENTS

LEAVE A REPLY