ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾದ ಬಿ.ಎಸ್ ಯಡಿಯೂರಪ್ಪ

ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾದ ಬಿ.ಎಸ್ ಯಡಿಯೂರಪ್ಪ

253
0
SHARE

ಬೆಂಗಳೂರು(ಅ,22,2017): ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅನಾರೋಗ್ಯದಿಂದ ಮತ್ತೆ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರ ಕಫ ಸಮಸ್ಯೆಯಿಂದ ಬಳಲುತ್ತಿರುವ ಬಿಎಸ್ ಯಡಿಯೂರಪ್ಪ ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಅಪೊಲೋ ಆಸ್ಪತ್ರೆಗೆ ಮತ್ತೆ ದಾಖಲಾಗಿದ್ದಾರೆ. ಕಳೆದ ವಾರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಅಲ್ಲದೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ಈ ನಡುವೆ ನಿನ್ನೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಗಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿರುವ ಆರೋಪ ಮಾಡಿ ದಾಖಲೆ ಬಿಡುಗಡೆ ಮಾಡಿದ್ದರು.

NO COMMENTS

LEAVE A REPLY