ಟಾಟಾ ಏಸ್ ವಾಹನವೊಂದು ಮರಕ್ಕೆ ಡಿಕ್ಕಿ: ಇಬ್ಬರು ಸಾವು,ಐವರಿಗೆ ಗಂಭೀರ ಗಾಯ

ಟಾಟಾ ಏಸ್ ವಾಹನವೊಂದು ಮರಕ್ಕೆ ಡಿಕ್ಕಿ: ಇಬ್ಬರು ಸಾವು,ಐವರಿಗೆ ಗಂಭೀರ ಗಾಯ

228
0
SHARE

ಮೈಸೂರು(ಅ,25,2017):ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಟಿ.ನರಸೀಪುರ ಹಾಗೂ ಮೈಸೂರು ರಸ್ತೆಯ ಕೆಂಪಯ್ಯನಹುಂಡಿ ಬಳಿ ಇಂದು ಬೆಳಿಗ್ಗೆ ಸುಮಾರು 9.30 ರ ವೇಳೆಗೆ ಈ ಘಟನೆ ನಡೆದಿದೆ. ತಲಕಾಡಿನಿಂದ ಮೈಸೂರಿಗೆ ಬರುತ್ತಿದ್ದ ವಾಹನವು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ ಐವರಿಗೆ ಗಂಭೀರ ಗಾಯಗಳಾಗಿದೆ.ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.ಇವರು ಮೂಲತಃ ತಲಕಾಡಿನ ನಿವಾಸಿಗಳೆಂದು ತಿಳಿಯಲಾಗಿದೆ.

ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY