ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಆಗಮನ : 24 ಗಂಟೆ ಸಾರ್ವಜನಿಕರಿಗೆ ದರ್ಶನ ನಿಷೇಧ

ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಆಗಮನ : 24 ಗಂಟೆ ಸಾರ್ವಜನಿಕರಿಗೆ ದರ್ಶನ ನಿಷೇಧ

260
0
SHARE

ಮಂಗಳೂರು(ಅ,26,2017):ಪ್ರಧಾನಿ ನರೇಂದ್ರ ಮೋದಿ ಅವರು ಅ.29ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಅ.28ರ ಮಧ್ಯಾಹ್ನ 2 ಗಂಟೆಯಿಂದ 29ರ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ಮಂಜುನಾಥ ಸ್ವಾಮಿ ದರ್ಶನಕ್ಕೆ ಸಾರ್ವಜನಿಕ ಅವಕಾಶ ನಿಷೇಧಿಸಲಾಗಿದೆ.

ವಿಶೇಷ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕ್ಕೆ ಆಗಮಿಸುವ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮುಖಾಂತರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಆಗಮಿಸುವರು. ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸುವ ಮೋದಿ ನಂತರ ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಧರ್ಮಸ್ಥಳ ಸುತ್ತಮುತ್ತ ಭದ್ರತೆ ಕಲ್ಪಿಸಲಾಗಿದೆ. ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಬಂದ್‌ ವಾತಾವರಣ ಕಂಡು ಬರಲಿದೆ. ಧರ್ಮಸ್ಥಳದಲ್ಲಿ ಶನಿವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯಾಹ್ನದವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಮಾಲಿಕರಿಗೆ ಸೂಚನೆ ನೀಡಲಾದೆ. ಭದ್ರತೆ ದೃಷ್ಟಿಯಿಂದ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಕೂಡ ಈಗಾಗಲೇ ಉಜಿರೆ ಹಾಗೂ ಧರ್ಮಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

NO COMMENTS

LEAVE A REPLY