ನವೆಂಬರ್‌ ತಿಂಗಳು ಎಲ್ಲಾ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳು ಮಾತ್ರ ಪ್ರದರ್ಶನಕ್ಕಾಗಿ ಆಗ್ರಹ

ನವೆಂಬರ್‌ ತಿಂಗಳು ಎಲ್ಲಾ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳು ಮಾತ್ರ ಪ್ರದರ್ಶನಕ್ಕಾಗಿ ಆಗ್ರಹ

245
0
SHARE

ಬೆಂಗಳೂರು(ಅ,27,2017): ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ ತಿಂಗಳು ಪೂರ್ತಿ ರಾಜ್ಯದ ಎಲ್ಲ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಕೇವಲ ಕನ್ನಡ ಚಲನಚಿತ್ರಗಳನ್ನು ಪ್ರದರ್ಶನ ಮಾಡಬೇಕು ಮತ್ತು ಎಲ್ಲ ನಾಮಫಲಗಳಲ್ಲೂ ಕನ್ನಡ ಕಡ್ಡಾಯವಾಗಿರುವಂತೆ, ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ನ.1ರಂದು ಬೃಹತ್‌ ಮೆರವಣಿಗೆ ಹಮ್ಮಿಕೊಂಡಿದೆ.

ನಗರದ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆಯುವ ಮೆರವಣಿಗೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕನ್ನಡ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ಈ ವೇಳೆ ರಾಜ್ಯಾದ್ಯಂತ ಕೇವಲ ಕನ್ನಡ ಚಲನಚಿತ್ರಗಳನ್ನೇ ಪ್ರದರ್ಶಿಸಬೇಕು. ಎಲ್ಲ ನಾಮಫಲಗಳಲ್ಲೂ ಕನ್ನಡ ಕಡ್ಡಾಯವಾಗಿರುವಂತೆ ಆಗ್ರಹಿಸಲಾಗುವುದು,” ಎಂದು ಒಕ್ಕೂಟದ ಅಧ್ಯಕ್ಷ ಎಚ್‌.ಬಿ. ಸುರೇಶ್‌ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ಚಿತ್ರಮಂದಿರದ ಮಾಲೀಕರು ಕನ್ನಡ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಕನ್ನಡ ಹಬ್ಬ ಆಚರಿಸಬೇಕು. ಈ ಕುರಿತು ಕರ್ನಾಟಕ ವಾಣಿಜ್ಯ ಮಂಡಳಿ ಹಾಗೂ ರಾಜ್ಯ ಸರಕಾರ ರಾಜ್ಯದ ಎಲ್ಲಾ ಚಿತ್ರಮಂದಿರಗಳಿಗೂ ಸೂಚನೆ ನೀಡಬೇಕು,” ಎಂದು ಕೋರಿದರು.
ನವೆಂಬರ್‌ನಲ್ಲಿ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಪರಭಾಷೆಯ ಚಿತ್ರಗಳು ಪ್ರದರ್ಶನಗೊಳ್ಳದಂತೆ ಒಕ್ಕೂಟದ ಸದಸ್ಯರು ಕಾವಲು ಕಾಯಲಿದ್ದಾರೆ. ಹಾಗೇನಾದರೂ ಪರಭಾಷೆಯ ಚಿತ್ರಗಳು ಪ್ರದರ್ಶನ ಕಂಡರೆ ಅಂತಹವರ ವಿರುದ್ಧ ಪ್ರತಿಭಟನೆ ನಡೆಸುವುದರ ಜತೆಗೆ ಚಿತ್ರಮಂದಿರಗಳಿಗೆ ಮುತ್ತಿಗೆ ಹಾಕಿ ಪ್ರದರ್ಶನ ತಡೆಯಲಾಗುವುದು. ಶೇ. 60ರಷ್ಟು ಕನ್ನಡ ಇಲ್ಲದ ನಾಮ ಫಲಕಗಳಿಗೆ ಮಸಿ ಬಳಿಯಲಾಗುವುದು,” ಎಂದು ಎಚ್ಚರಿಸಿದರು.

NO COMMENTS

LEAVE A REPLY