ವಸ್ತುಪ್ರದರ್ಶನದಲ್ಲಿ ನಾಳೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ

ವಸ್ತುಪ್ರದರ್ಶನದಲ್ಲಿ ನಾಳೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ

205
0
SHARE

ಮೈಸೂರು (ನ,13, 2017): ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ  ನವೆಂಬರ್ 14 ರಂದು “ಮಕ್ಕಳ ದಿನಾಚರಣೆಯ” ಅಂಗವಾಗಿ‌ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಸ್ತುಪ್ರದರ್ಶನ ವೀಕ್ಷಿಸಲು ಬರುವ ಶಾಲಾ ಮಕ್ಕಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ.

ಮಕ್ಕಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿ “ಮಕ್ಕಳ ದಿನಾಚರಣೆಯ”ನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಮೂಲಕ ತಿಳಿಸಿದ್ದಾರೆ.

NO COMMENTS

LEAVE A REPLY