ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು ಏಳ್ವರಿಗೆ ಗಂಭೀರ ಗಾಯ

ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು ಏಳ್ವರಿಗೆ ಗಂಭೀರ ಗಾಯ

141
0
SHARE

ರಾಮನಗರ(ನ,16,2017):ಸರ್ಕಾರಿ ಬಸ್ಸೊಂದು ಸ್ಕೂಲ್ ಬಸ್ ಗೆ ಡಿಕ್ಕಿಯಾದ ಪರಿಣಾಮ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ ಏಳು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಮರಳವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಅನ್ನಪೂರ್ಣೇಶ್ವರಿ ಆಶ್ರಮ ಶಾಲೆಗೆ ಸೇರಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು,7 ಮಂದಿಗೆ ಗಾಯಗಳಾಗಿದೆ.ಗಾಯಾಳುಗಳನ್ನ ಕನಕಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY