ಕಾಲುಜಾರಿ ಕೆರೆಯಲ್ಲಿ ಮುಳುಗಿ ನಾಲ್ವರು ಸಾವು

ಕಾಲುಜಾರಿ ಕೆರೆಯಲ್ಲಿ ಮುಳುಗಿ ನಾಲ್ವರು ಸಾವು

225
0
SHARE

ರಾಮನಗರ(ನ,18,2017):ಬಟ್ಟೆ ತೊಳೆಯುವ ವೇಳೆ ಕೆರೆಯಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಚನ್ನಪಟ್ಟಣ ತಾಲೂಕಿನ ವಿರೂಪಾಕ್ಷಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಲತಿ(35), ಅನು(10), ಪೂರ್ಣಿಮ(8),ಹಾಗೂ ನಮ್ರತ(10) ಮೃತಪಟ್ಟವರು. ನಾಲ್ವರು ಬಟ್ಟೆ ತೊಳೆಯುವ ಸಂದರ್ಭದಲ್ಲಿ, ಕಾಲುಜಾರಿ ಬಿದ್ದು ಒಬ್ಬ ಮಹಿಳೆ ಹಾಗೂ ಮೂವರು ಯುವತಿಯರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

ಮೃತದೇಹಗಳನ್ನ ಕೆರೆಯಿಂದ ಹೊರತೆಗೆಯಲಾಗಿದ್ದು, ಈ ಕುರಿತು ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY