ಅಪರಿಚಿತರಿಂದ ಜೆಡಿಎಸ್ ಕಾರ್ಯಕರ್ತನ ಬರ್ಬರ ಹತ್ಯೆ

ಅಪರಿಚಿತರಿಂದ ಜೆಡಿಎಸ್ ಕಾರ್ಯಕರ್ತನ ಬರ್ಬರ ಹತ್ಯೆ

188
0
SHARE

ಮೈಸೂರು(ನ,29,2017):ಹಾಡಹಗಲೇ ಜೆಡಿಎಸ್ ಕಾರ್ಯಕರ್ತನನ್ನ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಕೌಡ್ಲೆ ಸಮೀಪದ ಮಲ್ಲಿಗೆರೆಯಲ್ಲಿ ಈ ಘಟನೆ ನಡೆದಿದೆ. ಮಲ್ಲಿಗೆರೆ ಗ್ರಾಮದ ಸಂತೋಷ್ ಕುಮಾರ್ (27) ಮೃತಪಟ್ಟ ಜೆಡಿಎಸ್ ಮುಖಂಡ. ಸಂತೋಷ್ ಮಾಜಿ ಶಾಸಕ ಸುರೇಶ್ ಗೌಡ ಅವರ ಬೆಂಬಲಿಗ ಎಂದು ಹೇಳಲಾಗುತ್ತಿದೆ.

ಸಂತೋಷ್ ರಸ್ತೆ ಬದಿ ಮಾತನಾಡುತ್ತಿದ್ದ ವೇಳೆ ಇಂಡಿಕಾ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೊಪ್ಪ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY