ಸಿಎಂ ಬಗ್ಗೆ ಅವಹೇಳನಕಾರಿ ಹೇಳಿಕೆ: ಅನಂತಕುಮಾರ್ ಹೆಗಡೆ ವಿರುದ್ಧ ಎಫ್.ಐ.ಆರ್ ದಾಖಲು

ಸಿಎಂ ಬಗ್ಗೆ ಅವಹೇಳನಕಾರಿ ಹೇಳಿಕೆ: ಅನಂತಕುಮಾರ್ ಹೆಗಡೆ ವಿರುದ್ಧ ಎಫ್.ಐ.ಆರ್ ದಾಖಲು

223
0
SHARE

ಮೈಸೂರು(ಡಿ,7,2017):ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಅವಾಚ್ಯ ಶಬ್ದಗಳಿಂದ ನಿಂದನೆ ಕೋಮು ಸೌಹಾರ್ದಕ್ಕೆ ಧಕ್ಕೆ ಆರೋಪದಡಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಬೆಳಗಾವಿಯ ಕಿತ್ತೂರಿನಲ್ಲಿ ಮಾತನಾಡುತ್ತಾ, ಸಿದ್ದರಾಮಯ್ಯ ಅಧಿಕಾರದ ಆಸೆಗಾಗಿ ಯಾರ ಕಾಲಿನ ಬೂಟನ್ನು ಬೇಕಾದರೂ ನೆಕ್ಕುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು.

ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿದ ಬೆನ್ನಲ್ಲೇ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕ ಈ ಬಗ್ಗೆ ದೂರು ನೀಡಿತ್ತು. ಪೊಲೀಸರು ದೂರನ್ನು ತಿರಸ್ಕರಿಸಿದ್ದರು. ಇದೇ ವಿಚಾರವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮೈಸೂರು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಾಲಯದ ಸೂಚನೆಯ ಮೇರೆಗೆ ದೇವರಾಜ ಠಾಣೆಯ ಪೊಲೀಸರು ಸಚಿವ ಅನಂತಕುಮಾರ್ ಹೆಗಡೆ ವಿರುದ್ದ ಎಫ್.ಐ.ಆರ್ ದಾಖಲಿಸಿದ್ದಾರೆ. ಸೆಕ್ಷನ್ 153/A 504 ಅಡಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ದ ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY