ಬೆಂಗಳೂರು(ಡಿ,19,2017):ಗುಜರಾತ್, ಹಿಮಾಚಲ ಪ್ರದೇಶದಲ್ಲಿ ವಿಜಯ ಪತಾಕೆ ಹಾರಿಸಿರುವ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಮಾಡಲು ಕೇಂದ್ರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಇದೀಗ ಕರ್ನಾಟಕದ ಮೇಲೆ ಕಣ್ಣಿಟ್ಟಿದ್ದಾರೆ.
2018 ರ ಏಪ್ರಿಲ್ ನಲ್ಲಿ ಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಮಲವನ್ನು ಅರಳಿಸಲು ಕೇಂದ್ರ ಬಿಜೆಪಿ ನಾಯಕರು ಮುಂದಾಗಿದ್ದು, ಈ ನಡುವೆ ಜನವರಿ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸಿ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೀಗಾಗಿ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ತಂದು ಕಾಂಗ್ರೆಸ್ ನೆಲ ಕಚ್ಚುವಂತೆ ಮಾಡಲು ಕೇಂದ್ರ ನಾಯಕರು ಜನವರಿಯಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಇದೀಗ ಸಂಸತ್ ಚಳಿಗಾಲ ಅಧೀವೇಶನ ನಡೆಯುತ್ತಿದ್ದು, ಅಧಿವೇಶನ ಬಳಿಕ ಅಂದರೇ ಜನವರಿ 5ರ ನಂತರ ಕೇಂದ್ರ ಬಿಜೆಪಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪರಿವರ್ತನಾರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಡಿಸೆಂಬರ್ 21ರಂದು ಹುಬ್ಬಳ್ಳಿಯಲ್ಲಿ ನಡೆಯುವ ಪರಿವರ್ತನಾರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.