ಬಿಗ್ ಬಾಸ್ ನಲ್ಲಿ ‘ಕಿರಿಕ್’: ಸಂಯುಕ್ತ ಕಿಕ್ ಔಟ್

ಬಿಗ್ ಬಾಸ್ ನಲ್ಲಿ ‘ಕಿರಿಕ್’: ಸಂಯುಕ್ತ ಕಿಕ್ ಔಟ್

221
0
SHARE

ಬೆಂಗಳೂರು(ಡಿ.21.2017):ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು. ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು.

ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು. ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.

NO COMMENTS

LEAVE A REPLY