ಸಿಎಂ ರಾಜ್ಯ ಪ್ರವಾಸ : ಇಂದು ಬೆಳಗಾವಿಗೆ ಭೇಟಿ

ಸಿಎಂ ರಾಜ್ಯ ಪ್ರವಾಸ : ಇಂದು ಬೆಳಗಾವಿಗೆ ಭೇಟಿ

256
0
SHARE

ಬೆಳಗಾವಿ(ಡಿ.22.2017):ನವ ಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ.

ಬೆಳಗಾವಿ ಜಿಲ್ಲೆಯ ಯಮಕನಮರಡಿ, ರಾಮದುರ್ಗ, ಕಿತ್ತೂರು ಕ್ಷೇತ್ರಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಶಾಸಕ ಸತೀಶ ಜಾರಕಿಹೊಳಿ, ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಸಂಸದ ಪ್ರಕಾಶ ಹುಕ್ಕೇರಿ ಸಿದ್ದರಾಮಯ್ಯ ಜೊತೆ ಉಪಸ್ಥಿತರಿರುವರು.

ಬೆಳಗಾವಿ ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರ ನೀಡಿದ ಕೊಡುಗೆಗಳು

ಲೋಕೋಪಯೋಗಿ, ಇಂಧನ, ಗ್ರಾಮೀಣ ಕುಡಿಯುವ ನೀರು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಒಟ್ಟು 70.43 ಕೋಟಿಯ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ಸಿಗಲಿದೆ.

ಕೈಗಾರಿಕಾ ಪ್ರಗತಿಯಲ್ಲಿ ಕರ್ನಾಟಕವೇ ನಂ.1: ಸಿದ್ದರಾಮಯ್ಯ

ರಾಜ್ಯದಲ್ಲಿಯೇ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿಯಲ್ಲಿ ಸಿದ್ದರಾಮಯ್ಯ ಪ್ರವಾಸ ಮಾಡುತ್ತಿದ್ದಾರೆ. ಗುರುವಾರ ಗೋಕಾಕ್, ರಾಯಭಾಗ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಪ್ರವಾಸ ಮಾಡಿದ್ದರು. ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ಬೆಳಗಾವಿಯಲ್ಲಿ ಕಾಂಗ್ರೆಸ್‌ ಗೆಲ್ಲಿಸಲು ‘ಮಿಷನ್ 12’ ತಂತ್ರ!

18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ದೊಡ್ಡ ಕ್ಷೇತ್ರ ಬೆಳಗಾವಿ ಜಿಲ್ಲೆ. ರಮೇಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಹ ಇದೇ ಜಿಲ್ಲೆಯವರು. ಮುಂದಿನ ಚುನಾವಣೆಯಲ್ಲಿ 12 ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ.

NO COMMENTS

LEAVE A REPLY