ಬಾಲಕಿ ಕೊಲೆ: ಚಿಕ್ಕಮಗಳೂರು ಬಂದ್

ಬಾಲಕಿ ಕೊಲೆ: ಚಿಕ್ಕಮಗಳೂರು ಬಂದ್

227
0
SHARE

ಚಿಕ್ಕಮಗಳೂರು(ಡಿ.22,2017):ವಿಜಯಪುರದಲ್ಲಿ ನಡೆದ ದಲಿತ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಕನ್ನಡ ಹಾಗೂ ಪ್ರಗತಿಪರ ಸಂಘಟನೆಗಳು ಇಂದು ಚಿಕ್ಕಮಗಳೂರು ಬಂದ್ ಗೆ ಕರೆ ನೀಡಿದ್ದಾರೆ.

ಕನ್ನಡ, ಪ್ರಗತಿಪರ, ದಲಿತ ಸಂಘಟನೆಗಳು ನೀಡಿರುವ ಬಂದ್ ಕರೆಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಲ್ಲಿ ವಾಹನ ಸಂಚಾರ ಎಂದಿನಂತೆ ಇದ್ದು, ಅಂಗಡಿ ಮುಂಗಟ್ಟುಗಳು ಮತ್ತು ಶಾಲಾ ಕಾಲೇಜುಗಳು ತೆರೆದಿವೆ.

ಇನ್ನು ಪ್ರತಿಭಟನಾಕಾರರು ನಗರದ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ ಬಳಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

NO COMMENTS

LEAVE A REPLY