ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಜೈರಾಮ್‌ ಠಾಕೂರ್‌ ಆಯ್ಕೆ

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಜೈರಾಮ್‌ ಠಾಕೂರ್‌ ಆಯ್ಕೆ

137
0
SHARE

ನವದೆಹಲಿ(ಡಿ.24.2017): ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಬಿಜೆಪಿ ನಾಯಕ ಜೈರಾಮ್‌ ಠಾಕೂರ್‌ ಆಯ್ಕೆಯಾಗಿದ್ದಾರೆ.

ಕೇಂದ್ರ ವೀಕ್ಷಕರ ಸಮ್ಮುಖದಲ್ಲಿ ಭಾನುವಾರ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಜೈರಾಮ್‌ ಠಾಕೂರ್‌ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಒಟ್ಟು 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ 44 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದ ಮಾಜಿ ಮುಖ್ಯಮಂತ್ರಿ ಪ್ರೇಮ್‌ ಕುಮಾರ್‌ ಧುಮಾಲ್‌ ಸ್ವಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರಿಂದ ಹೊಸ ನಾಯಕ ಆಯ್ಕೆ ಮಾಡಲಾಗಿದೆ.

NO COMMENTS

LEAVE A REPLY