ಇಂದು ಖಾಸಗಿ ಆಸ್ಪತ್ರೆ ಒಪಿಡಿ ಬಂದ್

ಇಂದು ಖಾಸಗಿ ಆಸ್ಪತ್ರೆ ಒಪಿಡಿ ಬಂದ್

188
0
SHARE

ಬೆಂಗಳೂರು(ಜ.2.2018):ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಷ್ಕರ ಬೆಂಬಲಿಸಿ ರಾಜ್ಯದಲ್ಲಿರುವ ಸುಮಾರು 15 ಸಾವಿರ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ಚಿಕಿತ್ಸಾ ವಿಭಾಗ ಬಂದ್ ಮಾಡಲು ಐಎಂಎ ಕರ್ನಾಟಕ ಶಾಖೆ ನಿರ್ಧರಿಸಿದೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹೊರರೋಗಿ ಚಿಕಿತ್ಸಾ ವಿಭಾಗ (ಒಪಿಡಿ) ಕಾರ್ಯನಿರ್ವಹಿಸುವುದಿಲ್ಲ. ಆದರೆ, ತುರ್ತು ಚಿಕಿತ್ಸಾ ಸೌಲಭ್ಯ, ಔಷಧಿ ಅಂಗಡಿಗಳು ಮತ್ತು ಒಳರೋಗಿ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

NO COMMENTS

LEAVE A REPLY