ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಏರಿಕೆ..!

ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಏರಿಕೆ..!

185
0
SHARE

ನವದೆಹಲಿ(ಜ.5.2018): ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ, ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಶೇ. 126 ರಷ್ಟು, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಶೇ. 386 ರಷ್ಟು ಏರಿಕೆ ಮಾಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ, ಅದರ ಲಾಭವನ್ನು ಸಾರ್ವಜನಿಕರಿಗೆ ತಲುಪಿಸಿಲ್ಲ. ಅಬಕಾರಿ ಸುಂಕವನ್ನು ಹೆಚ್ಚಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ 5.5 ಲಕ್ಷ ಕೋಟಿ ರೂ. ತುಂಬಿಸಿಕೊಂಡು ಸರ್ಕಾರ ಮಾಡಿದ್ದೇನು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

2014 ರ ಮಾರ್ಚ್ ನಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರುವ ಮೊದಲು ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 110 ಡಾಲರ್ ಇತ್ತು. ಬಿ.ಜೆ.ಪಿ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಕಚ್ಚಾ ತೈಲದ ಬೆಲೆ ಇಳಿಕೆಯಾಗಿ, 2016 ರ ಜೂನ್ ನಲ್ಲಿ ಬ್ಯಾರಲ್ ಗೆ 40 ಡಾಲರ್ ತಲುಪಿತು. ಪ್ರಸ್ತುತ 60 ಡಾಲರ್ ಗೆ ತಲುಪಿದೆ ಎಂದು ಹೇಳಿದ್ದಾರೆ.

ಕಚ್ಚಾ ತೈಲದ ಬೆಲೆ ಇಳಿಕೆಯಾದಂತೆ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

NO COMMENTS

LEAVE A REPLY