ನಿರುದ್ಯೋಗಿಗಳಿಗೆ ಸಂತೋಷದ ಸುದ್ದಿ: 22,342 ಹುದ್ದೆ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್​ಸಿಗ್ನಲ್

ನಿರುದ್ಯೋಗಿಗಳಿಗೆ ಸಂತೋಷದ ಸುದ್ದಿ: 22,342 ಹುದ್ದೆ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್​ಸಿಗ್ನಲ್

209
0
SHARE

ಬೆಂಗಳೂರು(ಜ.6.2018):ರಾಜ್ಯ ಸರ್ಕಾರವು ಪ್ರಾಂಶುಪಾಲರು, ಶಿಕ್ಷಕರು, ಪ್ರಥಮ ದರ್ಜೆ ಸಹಾಯಕರು, ಅಡುಗೆಯವರು, ರಾತ್ರಿ ಕಾವಲುಗಾರರು ಸೇರಿ ಸಮಾಜ ಕಲ್ಯಾಣ ಇಲಾಖೆಯ ಒಟ್ಟು 22,342 ಹುದ್ದೆಗಳನ್ನು ನೇರ ಹಾಗೂ ಕೆಪಿಎಸ್ ಸಿ ಮೂಲಕ ನೇಮಕ ಮಾಡಲು ನಿರ್ಧರಿಸಿದೆ.

ಖಾಲಿಯಿರುವ ಹುದ್ದೆಗಳಿಗಷ್ಟೇ ನೇಮಕ ಮಾಡುತ್ತಿರುವುದರಿಂದ ಈಗಾಗಲೇ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು, ಸ್ವಚ್ಛತಾ ಸಿಬ್ಬಂದಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದ ಸಮಿತಿಯ ಮೂಲಕ ಪಾರದರ್ಶಕವಾಗಿ ನೇರ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

NO COMMENTS

LEAVE A REPLY