ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಹೋದ ಮೂವರು ಕಾರ್ಮಿಕರು ಸಾವು

ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಹೋದ ಮೂವರು ಕಾರ್ಮಿಕರು ಸಾವು

237
0
SHARE

ಬೆಂಗಳೂರು(ಜ.7.2018):ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಮೂವರು ಕಾರ್ಮಿಕರು ಹೊರಬರಲಾಗದೆ ಉಸಿರುಗಟ್ಟಿ ಸಾವಿಗೀಡಾದ ಘಟನೆ ಬೆಂಗಳೂರಿನ ಬಂಡಿಪಾಳ್ಯದಲ್ಲಿ ನಡೆದಿದೆ.

ಒಳಚರಂಡಿ ನೀರು ಸಂಸ್ಕರಣಾ ಘಟಕದ ಎಸ್ ಟಿಪಿಗೆ ಇಳಿದು ಸ್ವಚ್ಛಗೊಳಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇಲ್ಲಿನ ಸೋಮಸುಂದರ ಪಾಳ್ಯದ ಸಫಲ್ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಮೃತರನ್ನು ಮಾದೇವಯ್ಯ, ನಾರಾಯಣಸ್ವಾಮಿ ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.

ಮ್ಯಾನ್ ಹೋಲ್ ನಲ್ಲಿ ಸಿಲುಕಿದ್ದ ಮೂವರ ದೇಹವನ್ನು ಹೊರತೆಗೆದು ಸೇಂಟ್ ಜಾನ್ಸ್ ಆಸ್ಪತ್ರೆಗೆ ರಾವಾನಿಸಲಾಯಿತು. ಆದರೆ ಮೂವರನ್ನು ಕಾರ್ಮಿಕರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಯಾವುದೇ ಭದ್ರತಾ ಕ್ರಮಗಳನ್ನು ಕೈಗೊಳ್ಳದೇ ಕಾರ್ಮಿಕರನ್ನು ಮ್ಯಾನ್ ಹೋಲ್ ಒಳಗೆ ಇಳಿದಿದ್ದಾರೆ. ಈ ಕುರಿತು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY