ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ : ಐವರು ಸಜೀವ ದಹನ

ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ : ಐವರು ಸಜೀವ ದಹನ

252
0
SHARE

ಬೆಂಗಳೂರು(ಜ.08.2018):ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಕೆ.ಆರ್ ಮಾರ್ಕೆಟ್’ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.

ಮುಂಜಾನೆ 2.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಇಲ್ಲಿರುವ ಕೈಲಾಶ್ ಬಾರ್’ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಬಾರ್’ನಲ್ಲಿ ಮಲಗಿದ್ದ ಐವರೂ ಸಜೀವ ದಹನವಾಗಿದ್ದಾರೆ.
ಮಂಜುನಾಥ್, ಕೀರ್ತಿ, ಮಹೇಶ್, ಸ್ವಾಮಿ ಹಾಗೂ‌ ಪ್ರಸಾದ್ ಬೆಂಕಿ ಅವಘಡಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಬಾರ್’ನ ಕೆಳಮಹಡಿಗೆ ಬೆಂಕಿ ಬಿದ್ದಿದೆ. ಈ ವೇಳೆ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದವರು ಹೊಗೆ ಬರುತ್ತಿರುವುದನ್ನು ನೋಡಿ‌ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಳಿಕ ಸ್ಥಳಕ್ಕೆ 3 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ. 25 ಕ್ಕೂ ಅಧಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿ ಡಿಸಿಪಿ ಅನುಚೇತ್ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ.

NO COMMENTS

LEAVE A REPLY