ಬೆಂಗಳೂರಿನ ಅಗ್ನಿ ದುರಂತ ಘಟನಾ ಸ್ಥಳಕ್ಕೆ ಸಚಿವ ರಾಮಲಿಂಗರೆಡ್ಡಿ ಭೇಟಿ..

ಬೆಂಗಳೂರಿನ ಅಗ್ನಿ ದುರಂತ ಘಟನಾ ಸ್ಥಳಕ್ಕೆ ಸಚಿವ ರಾಮಲಿಂಗರೆಡ್ಡಿ ಭೇಟಿ..

244
0
SHARE

ಬೆಂಗಳೂರು(ಜ.8.2018):ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ರಾಮಲಿಂಗರೆಡ್ಡಿ ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವ ಕೆ.ಜೆ ಜಾರ್ಜ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಕಲಾಸಿ ಪಾಳ್ಯದ ಕೈಲಾಶ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಇಂದು ಬೆಳಗ್ಗೆ 2.30ರ ಸುಮಾರಿಗೆ ಈ ಬೆಂಕಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿದ್ದ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಬಾರ್ ಗೆ ಒಂದೇ ಬಾಗಿಲು ಇದೆ. ಹೀಗಾಗಿ ಹೊರಬರಲಾಗದೆ ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಸುಟ್ಟಗಾಯಗಳಿಂದ ಸಾವನ್ನಪ್ಪಿದರೇ ಮೂವರು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನು ಕೆ.ಆರ್ ಮಾರ್ಕೆಟ್ ವಾಣಿಜ್ಯ ಮಳಿಗೆ ಇದೆ. ಹೀಗಾಗಿ ಫೈರ್ ಸೇಪ್ಟಿ ಅಳವಡಿಸಿಕೊಳ್ಳಬೇಕು. ಈ ಬಗ್ಗೆ ಶಾಸಕರಿಗೆ ತಿಳಿಸುವುದಾಗಿ ಹೇಳಿದರು.

ದುರಂತ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಭೇಟಿ ನೀಡಿ ಬಳಿಕ ಮಾತನಾಡಿ, ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ದುರಂತ ಸಂಭವಿಸಿದ ನಂತರ ಬಾರ್ ಮಾಲೀಕ ಪರಾರಿಯಾಗಿರುವುದು ಸರಿಯಲ್ಲ. ಈ ನಡುವೆ ಎಲ್ಲಾ ಅಂಗಡಿಗಳು ಪೈರ್ ಸೇಫ್ಟಿ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಿದರು.

NO COMMENTS

LEAVE A REPLY