ಚಿತ್ರಮಂದಿರಗಳಲ್ಲಿ ರಾಷ್ಟಗೀತೆ ಕಡ್ಡಾಯವಲ್ಲ: ಸುಪ್ರಿಂ ಕೋರ್ಟ್ ಆದೇಶ

ಚಿತ್ರಮಂದಿರಗಳಲ್ಲಿ ರಾಷ್ಟಗೀತೆ ಕಡ್ಡಾಯವಲ್ಲ: ಸುಪ್ರಿಂ ಕೋರ್ಟ್ ಆದೇಶ

218
0
SHARE

ನವದೆಹಲಿ(ಜ.9.2018):ಸಿನಿಮಾ ಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಸುಪ್ರಿಂ ಕೋರ್ಟ್ ತನ್ನ ಆದೇಶವನ್ನು ಪರಿಷ್ಕರಣೆ ಮಾಡಿದೆ.

ಸಿನಿಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ ಎಂದು ಸುಪ್ರಿಂ ಕೋರ್ಟ್ ಇಂದು ಆದೇಶ ನೀಡಿದೆ.
ಸೋಮವಾರವಷ್ಟೇ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶವನ್ನು ಪರಿಷ್ಕರಿಸುವಂತೆ ಸುಪ್ರಿಂ ಕೋರ್ಟ್ ಗೆ ಕೇಂದ್ರ ಸರಕಾರ ಮನವಿ ಮಾಡಿಕೊಂಡಿತ್ತು

ಈ ಹಿಂದೆ 2016ರ ನವೆಂಬರ್ 30ರಂದು ಚಿತ್ರ ಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಪ್ರಸಾರ ಮಾಡಬೇಕು. ಈ ವೇಳೆ ಎಲ್ಲರೂ ಎದ್ದು ನಿಲ್ಲಬೇಕು ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿತ್ತು.
ನಂತರ ವಿಚಾರಣೆಯೊಂದರ ವೇಳೆ ದೇಶಪ್ರೇಮದ ಹೆಸರಿನಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವುದು ನೈತಿಕ ಪೊಲೀಸ್ ಗಿರಿ ಆಗುತ್ತದೆ. ಹಾಗಾಗಿ ತನ್ನ ಆದೇಶ ಮಾರ್ಪಾಡಿಗೆ ಸಿದ್ದವೆಂಬ ಸುಳಿವನ್ನು ಸುಪ್ರಿಂ ಕೋರ್ಟ್ ನೀಡಿತ್ತು. ಈ ಸಂಬಂಧ ಮಾರ್ಗದರ್ಶಿ ಸೂತ್ರ ರಚಿಸುವಂತೆಯೂ ಅದು ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದೀಗ ಕೇಂದ್ರ ಸರಕಾರ ರಾಷ್ಡ್ರಗೀತೆ ಕಡ್ಡಾಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ಜು ರೂಪಿಸಲು ಸಮಿತಿಯನ್ನು ರಚಿಸಿದೆ. ಹೀಗಾಗಿ ಸಮಿತಿ ವರದಿ ನೀಡುವವರೆಗೆ ಆದೇಶದಲ್ಲಿ ಬದಲಾವಣೆ ಮಾಡುವಂತೆ ಸುಪ್ರಿಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು. ಕೇಂದ್ರದ ಮನವಿಯನ್ನು ಪುರಸ್ಕರಿಸಿರುವ ಸುಪ್ರಿಂ ಕೋರ್ಟ್ ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಪ್ರಸಾರ ಕಡ್ಡಾಯವಲ್ಲ ಎಂಬ ಆದೇಶ ನೀಡಿದೆ.

NO COMMENTS

LEAVE A REPLY