ಮಹಿಳೆಯ ಜೊತೆ ಅಸಭ್ಯ ವರ್ತನೆ: ಯುವಕನಿಗೆ ಧರ್ಮದೇಟು..

ಮಹಿಳೆಯ ಜೊತೆ ಅಸಭ್ಯ ವರ್ತನೆ: ಯುವಕನಿಗೆ ಧರ್ಮದೇಟು..

85
0
SHARE

ರಾಯಚೂರು(ಜ.11.2018):ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊರ್ವನನ್ನು ಸ್ಥಳೀಯರು ಹಿಡಿದು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ರಾಯಚೂರಿನಲ್ಲಿ  ನಡೆದಿದೆ.

 

ಲಿಂಗಸುಗೂರು ತಾಲ್ಲೂಕಿನ  ಗುರುಗುಂಟಾ ಅಮರೇಶ್ವರ ದೇವಸ್ಥಾನದಲ್ಲಿ ಘಟನೆ ಈ ನಡೆದಿದೆ. ಬಸಟೆಪ್ಪ ಎನ್ನುವ ಯುವಕ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದ. ಮಹಿಳೆಯರು ಬೇಸತ್ತು ಈವಿಚಾರವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಗ್ರಾಮಸ್ಥರು ಯುವಕನ್ನು ಅರೆಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ ಎನ್ನಲಾಗುತ್ತಿದೆ.

ನಂತರ ಈತನನ್ನ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದ್ದು  ಈ ಕುರಿತು ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY