ದಲಿತರು ಕಾಂಗ್ರೆಸ್ ಗೆ ಮತ ಹಾಕಬೇಡಿ: ಬಿಎಸ್ ವೈ

ದಲಿತರು ಕಾಂಗ್ರೆಸ್ ಗೆ ಮತ ಹಾಕಬೇಡಿ: ಬಿಎಸ್ ವೈ

186
0
SHARE

ಕೋಲಾರ(ಜ.13.2018): ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ಭಾರತ ರತ್ನ ಪ್ರಶಸ್ತಿಯನ್ನು ನೀಡದೇ ಅವಮಾನಿಸಿದೆ. ಹೀಗಾಗಿ ದಲಿತರು ಮತ ಹಾಕಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ,  ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ರಾಜಕೀಯವಾಗಿ ಅವಮಾನಿಸಿದೆ. ಕಾಂಗ್ರೆಸ್ ಗೆ ಜನ ಅಧಿಕಾರಕೊಟ್ಟು ಮೋಸಹೋಗಿದ್ದಾರೆ. ಮುಂದಿನ ಬಾರಿ ಅಂತಹ ತಪ್ಪು ಮಾಡಬಾರದು ಎಂದು ಬಿಎಸ್ ವೈ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ದೇಶದಲ್ಲಿ ನೆಲಕಚ್ಚಿದ್ದು, ರಾಜ್ಯದಲ್ಲಿ ನೀರಾವರಿ ಯೋಜನೆ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಲೂಟಿ ಮಾಡುತ್ತಿದೆ ಎಂದು ಬಿಎಸ್ ಯಡಿಯೂರಪ್ಪ ಕಿಡಿಕಾರಿದರು.

NO COMMENTS

LEAVE A REPLY