ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆ ನೇಣಿಗೆ ಶರಣು

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆ ನೇಣಿಗೆ ಶರಣು

226
0
SHARE

ವಿಜಯಪುರ(ಜ.19.2018): ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ಅಮಾನುಷ ಘಟನೆ ನಡೆದಿದೆ.

ಸ್ವಾತಿ ಹೊಸಮನಿ(28) ನೇಣಿಗೆ ಶರಣಾಗಿರುವ ಮಹಿಳೆ. ಆಸ್ಪತ್ರೆಯ ವಾರ್ಡಿನ ಬಾತರೂಂ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಅಪ್ರಾಪ್ತೆ ಬಾಲಕಿ ಜೊತೆ ಅನುಚಿತ ವರ್ತನೆ ನಡೆಸಿದ್ದ ಎಂಬ ಕಾರಣಕ್ಕೆ ಸುರೇಶ ಹರಿಜನ್(22) ಯುವಕನಿಗೆ ಗ್ರಾಮಸ್ಥರು ಥಳಿಸಿದ್ದರು.

ಈ ಸಂದರ್ಭದಲ್ಲಿ ತನ್ನ ಮೇಲೆಯೂ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಿ, ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ದುಪಟ್ಟಾ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY