ಡಾಕ್ಟರೇಟ್ ಪಡೆಯಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ..

ಡಾಕ್ಟರೇಟ್ ಪಡೆಯಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ..

251
0
SHARE

ಮೈಸೂರು(ಜ.192018):ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಗೌರವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಶಿಫಾರಸು ಮಾಡಿದ್ದು,ಆದರೆ  ಡಾಕ್ಟರೇಟ್ ಗೌರವ ಬೇಡ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸಿಎಂ ಕಚೇರಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.  ಮೈಸೂರು ವಿಶ್ವ ವಿದ್ಯಾಲಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾಕ್ಟರೇಟ್ ನೀಡುವಂತೆ ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಎಂ.ಎಸ್.ಎಸ್.ಕುಮಾರ ಅವರು ಮೈಸೂರು ಕುಲಪತಿಗೆ ಪತ್ರ ಬರೆದು ಮನವಿ ಮಾಡಿದ್ದರು.  ಜತೆಗೆ  ಸುತ್ತೂರು ಶ್ರೀ, ಇಸ್ರೋ ಅಧ್ಯಕ್ಷ ಕಿರಣಕುಮಾರ ಹಾಗೂ ಸಾಲುಮರದ ತಿಮ್ಮಕ್ಕ ಅವರಿಗೆ 2018ನೇ ಸಾಲಿನಲ್ಲಿ ಗೌರವ ಡಾಕ್ಟರೇಟ್ ನೀಡಬೇಕು ಎಂದು ಒತ್ತಾಯಿಸಿದ್ದರು.

ಹಾಗೆಯೇ ಬೆಂಗಳೂರು ವಿಶ್ವವಿದ್ಯಾಲಯದಿಂದಲೂ ಕೂಡ ಸಿಎಂ ಸಿದ್ದರಾಮಯ್ಯಗೆ ಡಾಕ್ಟರೇಟ್ ನೀಡಲು ಶಿಫಾರಸು ಮಾಡಲಾಗಿತ್ತು, ಆದರೆ ಸಿಎಂ ಸಿದ್ದರಾಮಯ್ಯ ಡಾಕ್ಟರೇಟ್ ಪಡೆಯಲು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ.

NO COMMENTS

LEAVE A REPLY