ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..

ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..

243
0
SHARE

ನವದೆಹಲಿ(ಫೆ.04.2018): ನಿರುದ್ಯೋಗಿಗಳಿಗೆ ರೈಲ್ವೆ ಇಲಾಖೆಯು ಸಿಹಿ ಸುದ್ದಿಯನ್ನು ನೀಡಿದೆ. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 27,019 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಭಾರತೀಯ ರೈಲ್ವೆ ಇಲಾಖೆ ಅರ್ಜಿ ಆಹ್ವಾನಿಸಿದೆ.

10ನೇ ತರಗತಿ ಪಾಸ್‌‌ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗಾಗಿ ಅಸಿಸ್ಟೆಂಟ್ ಲೋಕೋ ಪೈಲಟ್ ಹಾಗೂ ಟೆಕ್ನಿಶಿಯನ್ ಹುದ್ದೆಗಳು ಖಾಲಿ ಇದ್ದು, ರೈಲ್ವೆ ರಿಕ್ರೂಟ್ಮೆಂಟ್ ಬೋರ್ಡ್‌‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಪಡೆಯಬಹುದಾಗಿದೆ.

ಆನ್‌‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಆಸಕ್ತ ಹಾಗೂ ಆರ್ಹ ವಿದ್ಯಾರ್ಥಿಗಳು ಮಾರ್ಚ್ 5ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದೇ ವೇಳೇ ಅರ್ಜಿ ಸಲ್ಲಿವು ಅಭ್ಯರ್ಥಿಗಳು ಕೇವಲ 1 ಅರ್ಜಿಯನ್ನು ಮಾತ್ರ ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದರೆ ಅದು ಅನರ್ಹಗೊಳ್ಳುತ್ತದೆ. ಕಂಪ್ಯೂಟರ್ ಆಧಾರಿತ ಎರಡು ಬಗೆಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಜೊತೆಗೆ ಆನ್ ಲೈನ್ ಪರೀಕ್ಷೆಯಿರುತ್ತದೆ.

ಆಪ್ಟಿಟ್ಯೂಡ್ ಟೆಸ್ಟ್ ಹಾಗೂ ಡಾಕ್ಯುಮೆಂಟ್ ವೆರಿಫಿಕೇಶನ್ ಇರುತ್ತದೆ. ಅಪ್ಲಿಕೇಶನ್ ಸಬ್‌ಮಿಟ್ ಮಾಡಿದ ಬಳಿಕವೂ ಅದನ್ನು ಎಡಿಟ್ ಮಾಡಬಹುದು. ಬದಲಾವಣೆಗಳನ್ನು ಮಾಡಲು 250 ರೂಪಾಯಿ ಶುಲ್ಕ ಭರಿಸಬೇಕಾಗಿದೆ.

NO COMMENTS

LEAVE A REPLY