ರಾಜ್ಯ ಬಜೆಟ್‌:ಹೆಣ್ಣು ಮಕ್ಕಳಿಗೆ ಪೂರ್ಣ ಶುಲ್ಕ ವಿನಾಯಿತಿ..

ರಾಜ್ಯ ಬಜೆಟ್‌:ಹೆಣ್ಣು ಮಕ್ಕಳಿಗೆ ಪೂರ್ಣ ಶುಲ್ಕ ವಿನಾಯಿತಿ..

179
0
SHARE

ಮೈಸೂರು(ಫೆ.17.2018):ಹೆಣ್ಣು ಮಕ್ಕಳ ಉನ್ನತ ಶಿಕ್ಷಣ ಉತ್ತೇಜನಕ್ಕಾಗಿ ಎಲ್ಲ ಸರಕಾರಿ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡುವುದಾಗಿ ಸರಕಾರ ಘೋಷಿಸಿದೆ.

3.7 ಲಕ್ಷ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಲಿದ್ದಾರೆ. ಇದಕ್ಕಾಗಿ ಸರಕಾರ 95 ಕೋಟಿ ರೂ. ಖರ್ಚು ಮಾಡಲು ಉದ್ದೇಶಿಸಿದೆ. ಕ್ರಾಂತಿ ಯೋಗಿ ಬಸವಣ್ಣನವರ ಚಿಂತನೆ ಪಸರಿಸಲು ಮೈಸೂರು ವಿವಿಯಲ್ಲಿ ಬಸವ ಅಧ್ಯಯನ ಕೇಂದ್ರ ಸ್ಥಾಪನೆಗೆ 2 ಕೋಟಿ ರೂ. ಅನುದಾನ, ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ ಹಾಗೂ ಬಾಗಲಕೋಟದ ಜಮಖಂಡಿಯಲ್ಲಿ ರಾಣಿಚೆನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ತಲಾ ಒಂದು ಕೋಟಿ ರೂ. ಅನುದಾನ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಕೊಂಕಣಿ ಅಧ್ಯಯನ ಪೀಠ ಸ್ಥಾಪನೆ ಘೋಷಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಗೆ 4,514 ಕೋಟಿ ರೂ. ಅನುದಾನ ಒದಗಿಸಲಾಗಿದೆ.

NO COMMENTS

LEAVE A REPLY