ರೈಲು ಯೋಜನೆ ಕುರಿತು ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಸಿಎಂ

ರೈಲು ಯೋಜನೆ ಕುರಿತು ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಸಿಎಂ

196
0
SHARE

ಮೈಸೂರು(ಫೆ.19.2018):ಇಂದು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೈಲು ಯೋಜನೆಗೆ ಚಾಲನೆ ನೀಡಲಿದ್ದು,  ಲೋಕಾರ್ಪಣೆಗೂ ಮೋದಲೇ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಟಾಂಗ್ ನೀಡಿದ್ದಾರೆ.

ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ. ರೈಲ್ವೆ ಯೋಜನೆಗೆ ಶೇ.50ರಷ್ಟು ಹಣ ಹಾಗೂ ಭೂಮಿಯನ್ನು ರಾಜ್ಯ ಸರ್ಕಾರ ನೀಡಿದೆ. ಕೇಂದ್ರಕ್ಕಿಂತ ರಾಜ್ಯವೇ ಹೆಚ್ಚು ಅನುದಾನ ನೀಡಿದೆ.ಹೀಗಾಗಿ ಸರ್ಕಾರಿ ಕಾರ್ಯಕ್ರಮದಲ್ಲಿ ನಾನು ಸಹ ಪಾಲ್ಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಇದೇ ವೇಳೆ ಬಿಜೆಪಿ ನಾಯಕರಿಗೆ ಪರೋಕ್ಷ ವಾಗಿ ಚಾಟಿ ಬೀಸಿದ ಸಿಎಂ ಸಿದ್ದರಾಮಯ್ಯ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಬಿಜೆಪಿ ಅಸ್ತಿತ್ವದಲ್ಲಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

NO COMMENTS

LEAVE A REPLY