ಇಂದಿನಿಂದ ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ಪ್ರಾರಂಭ..

ಇಂದಿನಿಂದ ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ಪ್ರಾರಂಭ..

195
0
SHARE

ಬೆಂಗಳೂರು (ಮಾ.01.2018): ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭಗೊಳ್ಳುತ್ತಿವೆ. ಪರೀಕ್ಷೆ ನಡೆಸಲು ಪಿಯು ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.

ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ,ಪರೀಕ್ಷಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಸೇರಿದಂತೆ ಹಲವು ಕ್ರಮಗಳನ್ನ ಈ ಭಾರಿ ಪರೀಕ್ಷಾ ಮಂಡಳಿ ಕೈಗೊಂಡಿದೆ.  ಬೆಳಿಗ್ಗೆ 10.15 ಕ್ಕೆ ಎಕಾನಾಮಿಕ್ಸ್ ಹಾಗೂ ಭೌತಶಾಸ್ತ್ರ ಪರೀಕ್ಷೆ   ನಡೆಯಲಿದೆ.

ಪ್ರಸಕ್ತ ಸಾಲಿನಲ್ಲಿ 3 ಲಕ್ಷದ 52 ಸಾವಿರದ 290 ಬಾಲಕರು ಹಾಗೂ 3 ಲಕ್ಷದ 37 ಸಾವಿರದ 860 ಬಾಲಕಿಯರು ಸೇರಿದಂತೆ ಒಟ್ಟು 6 ಲಕ್ಷದ 90ಸಾವಿರದ 150 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಇನ್ನು ಈ ಬಾರಿ 1ಸಾವಿರದ 4ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.ಜೊತೆಗೆ ಪ್ರಶ್ನೆ ಪತ್ರಿಕೆಗಳ ರವಾನೆ ಮತ್ತಿತರ ಪರೀಕ್ಷಾ ಕಾರ್ಯಗಳಿಗೆ ಬಳಸುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡುವ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಪಿಯು ಮಂಡಳಿ ಮುಂದಾಗಿದೆ.

ಪರೀಕ್ಷಾ ಕೇಂದ್ರಗಳಗೆ ಮೊಬೈಲ್ ತೆಗೆದುಕೊಂಡು ಹೋಗ್ತಿದ್ದ ಉಪನ್ಯಾಸಕರು ಇನ್ಮೇಲೆ ತೆಗೆದುಕೊಂಡು ಹೋಗುವಂತಿಲ್ಲ ಇದೇ ಮೊದಲ ಬಾರಿಗೆ ಪಿಯು ಮಂಡಳಿ ಪರೀಕ್ಷಾ ಕೇಂದ್ರದಲ್ಲಿ ಎಲ್ಲರಿಗೂ ಮೊಬೈಲ್ ನಿಷೇಧ ಮಾಡಲಾಗಿದೆ. ಅಲ್ಲದೆ ಮಾರ್ಚ್17 ಕ್ಕೆ ಎಲ್ಲಾ ಪರೀಕ್ಷೆಗಳು ಮುಕ್ತಾಯವಾಗಲಿದ್ದು,ಏಪ್ರಿಲ್ ಕೊನೆಯ ವಾರದಲ್ಲಿ ಪಿಯು ಫಲಿತಾಂಶ ಹೊರ ಬೀಳಲಿದೆ .

NO COMMENTS

LEAVE A REPLY