ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ನವೀನ್‌ ಕುಮಾರ್‌ ಎಸ್ಐಟಿ ವಶಕ್ಕೆ

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ನವೀನ್‌ ಕುಮಾರ್‌ ಎಸ್ಐಟಿ ವಶಕ್ಕೆ

186
0
SHARE

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಸಿಬಿ ವಶದಲ್ಲಿದ್ದ ನವೀನ್‌ ಕುಮಾರ್‌ ಎಂಬಾತನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ನವೀನ್‌ ಕುಮಾರ್‌ನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. 

ಗೌರಿ ಹತ್ಯೆಗೆ ಆರೋಪಿಗಳಿಗೆ ಶಸ್ತ್ರಾಸ್ತ್ರ ಪೂರೈಸಿದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗೌರಿ ಲಂಕೇಶ್‌ ಹತ್ಯೆ ಮಾಡಿದವರ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

NO COMMENTS

LEAVE A REPLY