ಮಾರ್ಚ್‌ 20, 21 ರಂದು ಕರಾವಳಿಯಲ್ಲಿ ರಾಹುಲ್‌ ಪ್ರವಾಸ

ಮಾರ್ಚ್‌ 20, 21 ರಂದು ಕರಾವಳಿಯಲ್ಲಿ ರಾಹುಲ್‌ ಪ್ರವಾಸ

424
0
SHARE

 

ಬೆಂಗಳೂರು : ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಮಾರ್ಚ್‌ 20, 21 ರಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ರಾಜ್ಯ ಕಾಂಗ್ರೆಸ್‌ ನಾಯಕರೊಂದಿಗೆ ರಾಹುಲ್‌ ಅವರು ದಿಲ್ಲಿಯಲ್ಲಿ ಮಂಗಳವಾರ ಸಭೆ ನಡೆಸಿದರು. ಈ ವೇಳೆ ರಾಹುಲ್‌ ಅವರ ರಾಜ್ಯ ಪ್ರವಾಸದ ವೇಳಾಪಟ್ಟಿ ಅಂತಿಮಗೊಳಿಸಲಾಯಿತು. ಅದರಂತೆ ಅವರು 2 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಯಾತ್ರೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಚುನಾವಣೆ ರಣತಂತ್ರ ಚರ್ಚೆ

ರಾಜ್ಯಸಭೆ ಚುನಾಚಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈ ಸಭೆ ಕರೆಯಲಾಗಿತ್ತು. ಆದರೆ, ವಿಧಾನಸಭೆ ಚುನಾವಣೆ ಬಗ್ಗೆಯೇ ಹೆಚ್ಚು ಸಮಾಲೋಚಿಸಲಾಯಿತು. ಉತ್ತರ ಕರ್ನಾಟಕದಲ್ಲಿ ತಾವು ಕೈಗೊಂಡ ಪ್ರವಾಸದ ಪರಿಣಾಮದ ಬಗ್ಗೆ ರಾಹುಲ್‌ ವರದಿ ಕೇಳಿದರು. ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಪ್ರಭಾವ ಹೆಚ್ಚದಂತೆ ಎಚ್ಚರ ವಹಿಸಬೇಕು. ಯಾವುದೇ ಮುಖಂಡರು ಆರೋಪಕ್ಕೆ ತುತ್ತಾಗದಂತೆ ನೋಡಿಕೊಳ್ಳಬೇಕು ಎಂದು ರಾಹುಲ್‌ ಸೂಚಿಸಿದರು ಎನ್ನಲಾಗಿದೆ.

ಗೌಡರು ಸಂಪರ್ಕಿಸಿಲ್ಲ

ರಾಜ್ಯಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗಿದೆ. ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲಿಸುವ ಬಗ್ಗೆ ಚರ್ಚೆಯಾಗಿಲ್ಲ. ಈ ಸಂಬಂಧ ದೇವೇಗೌಡರೂ ಸಂಪರ್ಕ ಮಾಡಿಲ್ಲ. ಕಾಂಗ್ರೆಸ್‌ನಿಂದಲೂ ಮೂವರು ಕಣಕ್ಕಿಳಿಯಲಿದ್ದಾರೆ ಎಂದು ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಪ್ರತಿಕ್ರಿಯಿಸಿದ್ದಾರೆ.

NO COMMENTS

LEAVE A REPLY