ಇಂದು ಸಿಎಂ ಹಲವು ಕಾರ್ಯಕ್ರಮಗಳ ನಿಮಿತ್ತ ಮೈಸೂರಿನಲ್ಲಿ ಪ್ರವಾಸ..

ಇಂದು ಸಿಎಂ ಹಲವು ಕಾರ್ಯಕ್ರಮಗಳ ನಿಮಿತ್ತ ಮೈಸೂರಿನಲ್ಲಿ ಪ್ರವಾಸ..

207
0
SHARE

ಮೈಸೂರು(ಮಾ.10.2018): ತಮ್ಮ ತವರು ಜಿಲ್ಲೆ ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬರೋಬ್ಬರಿ 16 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆಂದು ಮಾಹಿತಿ ತಿಳಿದು ಬಂದಿದೆ.

ರಾಜ್ಯವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿಯಿದೆ. ಹೀಗಾಗಿ ತರಾತುರಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ತವರು ಜಿಲ್ಲೆ ಮೈಸೂರಿನಲ್ಲಿ ಹಲವು ಕಟ್ಟಡಗಳ ಉದ್ಘಾಟನೆ, ಶಿಲನ್ಯಾಸ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ.

ಚುನಾವಣಾ ದಿನಾಂಕ ಶೀಘ್ರದಲ್ಲೇ ಘೋಷಣೆಯಾಗಲಿದ್ದು, ನೀತಿ ಸಂಹಿತೆ ಜಾರಿ ಬರಲಿದೆ. ಹೀಗಾಗಿ ಅದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅಪೂರ್ಣವಾಗಿರುವ ಕಾಮಗಾರಿಗಳನ್ನ ಉದ್ಘಾಟನೆಗೆ ಮುಂದಾಗಿದ್ದಾರೆ. ಇಂದು ಬೆಳಿಗ್ಗೆ 10 ರಿಂದ 10.30ರ ವೇಳೆಗೆ ನಗರ ಪ್ರವಾಸ ಆರಂಭಿಸಲಿರುವ ಅವರು ಸಂಜೆ 6.30ರವರೆಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

NO COMMENTS

LEAVE A REPLY