ಪತಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಶಶಿಕಲಾಗೆ 15 ದಿನಗಳ ಜಾಮೀನು ಮಂಜೂರು

ಪತಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಶಶಿಕಲಾಗೆ 15 ದಿನಗಳ ಜಾಮೀನು ಮಂಜೂರು

129
0
SHARE

 

ಚೆನ್ನೈ : ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ.ಶಶಿಕಲಾ ಅವರಿಗೆ  15 ದಿನಗಳ ಜಾಮೀನು ಮಂಜೂರು ಮಾಡಲಾಗಿದೆ.ಅಕ್ರಮ ಆಸ್ತಿ ಗಳಿಗೆ ಪ್ರಕರಣದಲ್ಲಿ ದೋಷಿಯಾಗಿರುವ ಶಶಕಲಾ ಅವರು ನಗರದ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ 4 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಪತಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ ರಸ್ತೆ ಮಾರ್ಗವಾಗಿ ತಂಜಾವೂರು ಕಡೆಗೆ ಶಶಿಕಲಾ ಪ್ರಯಾಣ ಬೆಳೆಸಿದ್ದಾರೆ.ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ  ಶಶಿಕಲಾ ಅವರ ಪತಿ ಎಂ. ನಟರಾಜನ್  ಅವರು ಚೆನ್ನೈನ ಗ್ಲೆನೇಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ  1-35 ರ ಸುಮಾರಿನಲ್ಲಿ ನಿಧನ ಹೊಂದಿದ್ದರು.ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ನಟರಾಜನ್ ಅವರಿಗೆ ಕಳೆದ ವರ್ಷ ಯಕೃತ್ ಕಸಿ ಮಾಡಲಾಗಿತ್ತು.ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ನಾಲ್ಕು ವರ್ಷ ಜೈಲು ಶಿಕ್ಷೆಗೊಳಗಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ   ಕೇಂದ್ರ ಕಾರಾಗೃಹದಲ್ಲಿ ಕಳೆದ ವರ್ಷದ ಫೆಬ್ರವರಿಯಿಂದಲೂ ಶಿಕ್ಷೆ ಅನುಭವಿಸುತ್ತಿದ್ದಾರೆ. 

NO COMMENTS

LEAVE A REPLY