ಸ್ಫೋಟಕ ಮಾಹಿತಿ ಹೊರಗೆಡವಿದ ಕೆ.ಎಸ್ ಈಶ್ವರಪ್ಪ

ಸ್ಫೋಟಕ ಮಾಹಿತಿ ಹೊರಗೆಡವಿದ ಕೆ.ಎಸ್ ಈಶ್ವರಪ್ಪ

257
0
SHARE

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸ್ಫೋಟಕ ಮಾಹಿತಿಯನ್ನು ರಿವೀಲ್ ಮಾಡಿದ್ದಾರೆ.

ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಯನ್ನು ಸಂಪರ್ಕಿಸುತ್ತಿದ್ದಾರೆ. ಆ ಶಾಸಕರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಬೇಕಿಲ್ಲವಂತೆ. ಅವರಾಗಿಯೇ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಯಾರು ಎಷ್ಟು ಅಂತಾ ಈಗ ಹೇಳಲ್ಲ ಎಂದ ಈಶ್ವರಪ್ಪ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.

ಇತ್ತ ಈಶ್ವರಪ್ಪ ರಾಣೆಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್.ಶಂಕರ್ ಅವರನ್ನು ಬಿ.ಎಸ್.ಯಡಿಯೂರಪ್ಪರ ಮನೆಗೆ ಕರೆತಂದಿದ್ದಾರೆ. ಈಶ್ವರಪ್ಪರ ದೂರದ ಸಂಬಂಧಿಯಾಗಿರುವ ಆರ್.ಶಂಕರ್ ಬಿಜೆಪಿಗೆ ಬೆಂಬಲ ನೀಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ

ವರದಿ ಸಂದೀಪ್ ಶನಿವಾರಸಂತೆ

NO COMMENTS

LEAVE A REPLY