ಕಾಂಗ್ರೆಸ್- ಬಿಜೆಪಿ ಮಧ್ಯೆ ಜಟಾಪಟಿ- `ಕೈ’ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ!

ಕಾಂಗ್ರೆಸ್- ಬಿಜೆಪಿ ಮಧ್ಯೆ ಜಟಾಪಟಿ- `ಕೈ’ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ!

265
0
SHARE

 

ಕಾಂಗ್ರೆಸ್- ಬಿಜೆಪಿ ಮಧ್ಯೆ ಜಟಾಪಟಿ- `ಕೈ’ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

ದಾವಣಗೆರೆ: ಚುನಾವಣೆ ಫಲಿತಾಂಶ ಹೊರಬಿದ್ದ ಕೂಡಲೇ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡಿದ್ದು, ಕಾಂಗ್ರೆಸ್ ಕಾರ್ಯಕರ್ತರಿಬ್ಬರಿಗೆ ಚಾಕು ಇರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಮಹಾಲಕ್ಷ್ಮಿ ಸರ್ಕಲ್ ನಲ್ಲಿ ಮಂಗಳವಾರ ರಾತ್ರಿ ಬಿಜೆಪಿ ವಿಜಯೋತ್ಸವದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿಗೆ ಮಾತು ಬೆಳೆದು ಮಾರಾಮಾರಿ ನಡೆದಿದೆ.

ಬಿಜೆಪಿ ಅಭ್ಯರ್ಥಿ ಎಂ.ಪಿ.ರೇಣುಕಾಚಾರ್ಯ ಗೆಲುವಿನ ಹಿನ್ನೆಲೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ ಮಂಜಪ್ಪ ನಿವಾಸದ ಎದುರು ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಈ ಆಚರಣೆ ಮಾಡುತ್ತಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಜೊತೆ ವಾಗ್ವಾದಕ್ಕೆ ಮುಂದಾಗಿದ್ದಾರೆ. ವಾಗ್ವಾದ ಕೈ ಕೈ ಮೀಲಾಯಿಸುವ ಹಂತಕ್ಕೆ ತೆರಳಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಲ್ಲಿ ಕಾಂಗ್ರೆಸ್ ನ ರಾಜು ಗುಡ್ಡಜ್ಜಿ, ಸಿದ್ದೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದರಿಂದ ಕೂಡಲೇ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಹೊನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂದೀಪ್ ಶನಿವಾರಸಂತೆ

NO COMMENTS

LEAVE A REPLY