ನಟ ದರ್ಶನ್ ತೂಗುದೀಪ ಕಾರು ಅಪಘಾತ…

ನಟ ದರ್ಶನ್ ತೂಗುದೀಪ ಕಾರು ಅಪಘಾತ…

133
0
SHARE

Post by Sandeep Shanivarasanthe

ಮೈಸೂರು, ಸೆಪ್ಟೆಂಬರ್ 24: ಚಿತ್ರ ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತಕ್ಕೊಳಗಾಗಿದ್ದು, ಅವರ ಬಲ ಮುಂಗೈ ಮುರಿದಿದೆ ಎಂದು ವರದಿಗಳು ತಿಳಿಸಿವೆ.

ಬೆಳಿಗ್ಗೆ ಸುಮಾರು ಮೂರು ಗಂಟೆಯ ಸಮಯದಲ್ಲಿ ಘಟನೆ ನಡೆದಿದ್ದು, ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ.ಅಪಘಾತಾಗುತ್ತಿದ್ದ ಸಮಯದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.

ದರ್ಶನ್ ಅವರೊಂದಿಗೆ ನಟರಾದ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಸಹ ಪ್ರಯಾಣಿಸುತ್ತಿದ್ದರು. ಅವರಿಗೂ ಗಾಯವಾಗಿದ್ದು, ಮೂವರಿಗೂ ಮೈಸೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಮೈಸೂರಿನ ಕೋಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ, ಬಂಧುಗಳು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.
ಬೆಳಗ್ಗೆ ಮೂರು ಗಂಟೆಗೆ ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆ ಯಲ್ಲಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದ್ದು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
ಖಾಸಗೀ ಹೊಟೇಲ್ ನಿಂದ ಹೊರಟಾಗ ಅಪಘಾತ
ತಡರಾತ್ರಿ ಖಾಸಗೀ ಹೊಟೇಲ್ ನಿಂದ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಿರಿಯ ನಟ ದೇವರಾಜ್ ,ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಮತ್ತೋರ್ವ ಸ್ನೇಹಿತನಿಗೂ ಗಾಯವಾಗಿ ಎಂದು ವರದಿಗಳು ತಿಳಿಸಿವೆ.
ದರ್ಶನ್ ಗೆ ಶಸ್ತ್ರ ಚಿಕಿತ್ಸೆ
ದರ್ಶನ್ ಅವರ ಕೈ ಮುರಿದ ಪರಿಣಾಮ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿದೆ ಎಂದು ಆಸ್ಪತ್ರೆ ಮೀಲಗಳು ಮಾಹಿತಿ ನೀಡಿವೆ. ದೇವರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಪ್ರಜ್ವಲ್ ದೇವರಾಜ್ ಅವರಿಗೆ ಕುತ್ತಿಗೆ ಭಾಗಕ್ಕೆ ಪೆಟ್ಟಾಗಿದೆ.

ಬೆಳಗ್ಗೆ ಮೂರು ಗಂಟೆಗೆ ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆ ಯಲ್ಲಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದ್ದು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
ಒಡೆಯ ಚಿತ್ರದ ಶೂಟಿಂಗ್
‘ಒಡೆಯ’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ದರ್ಶನ್, ಅದಕ್ಕೆಂದೇ ಮೈಸೂರಿಗೆ ತೆರಳಿದ್ದರು ಎನ್ನಲಾಗಿದೆ. ಕಾರ್ಯಕ್ರಮ ಮುಗಿಸಿ ತಡರಾತ್ರಿ ಮೈಸೂರಿನಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.ಅಪಘಾತಾಗುತ್ತಿದ್ದ ಸಮಯದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.

NO COMMENTS

LEAVE A REPLY