ರಂಗಕರ್ಮಿ ಪ್ರಸನ್ನ ಅವರಿಗೆ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ

ರಂಗಕರ್ಮಿ ಪ್ರಸನ್ನ ಅವರಿಗೆ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ

93
0
SHARE

post by Sandeep Shanivarasanthe

ಮೈಸೂರು ಸೆಪ್ಟೆಂಬರ್ 25:

2018ನೇ ಸಾಲಿನ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿಗೆ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು ಆಯ್ಕೆ ಮಾಡಲಾಗಿದೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಈ ವಿಷಯವನ್ನು ಪ್ರಕಟಿಸಿದರು. ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಪ್ರಸನ್ನ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

‘ಸಂಯುಕ್ತ ಕರ್ನಾಟಕ’ ಪತ್ರಿಕೆಯ ಸಂಪಾದಕ ಹುಣಸವಾಡಿ ರಾಜನ್, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ ಕೃಷ್ಣ ಈ ಸಮಿತಿಯ ಸದಸ್ಯರಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್ ಆರ್ ವಿಶುಕುಮಾರ್ ಸದಸ್ಯ ಕಾರ್ಯದರ್ಶಿಗಳಾಗಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೀಡಲಾಗುವ ಈ ಪ್ರಶಸ್ತಿ 5 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದ್ದು, ಗಾಂಧಿ ಜಯಂತಿಯ ದಿನದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈವರೆಗೆ ಈ ಪ್ರಶಸ್ತಿಗೆ ಹಿರಿಯ ಗಾಂಧಿವಾದಿಗಳಾದ ಎಸ್.ಎನ್. ಸುಬ್ಬರಾವ್, ಹೊ. ಶ್ರೀನಿವಾಸಯ್ಯ, ಚನ್ನಮ್ಮ ಹಳ್ಳಿಕೇರಿ ಹಾಗೂ ಹೆಚ್.ಎಸ್. ದೊರೆಸ್ವಾಮಿ ಅವರು ಆಯ್ಕೆಯಾಗಿದ್ದರು.

NO COMMENTS

LEAVE A REPLY